ಬೆಂಗಳೂರು : ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೈಯಲ್ಲಿ ಹೂ ಹಿಡಿದು, ಭಿತ್ತಿ ಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊಟ್ಟ ಮಾತು ಮರೆತ ಯಡಿಯೂರಪ್ಪ!
ಐದು ಬಾರಿ ಶಾಸಕರಾಗಿ ಗೆದ್ದಿರುವ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕಳೆದ ಬಾರಿ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಕ್ಕಿರಲಿಲ್ಲ.
Advertisement. Scroll to continue reading.
ಈ ಹಿನ್ನಲೆಯಲ್ಲಿ “ಇದು ನಮ್ಮ ಒಡಲನುಡಿ, ನೀವದನ್ನು ನಡೆಸಿಕೊಡಿ.
ಸಚಿವ ಸ್ಥಾನ ಸಿಗದಿದ್ದರೆ ಬೇಸರವಿಲ್ಲ, ಆದರೆ ಲಕ್ಷಾಂತರ ಮಂದಿಯ ಶಾಪ ನಿಮಗೆ ತಟ್ಟಲಿದೆ.
ಕುಂದಾಪುರದ ವಾಜಪೇಯಿ ಹಾಲಾಡಿಗೆ ಸಚಿವ ಸ್ಥಾನ ಕೊಡಿ” ಎಂಬ ಅಭಿಯಾನ ಕಳೆದ ಹಲವು ದಿನಗಳಿಂದ ನಡೆಯುತ್ತಿದೆ.
ಕಳೆದ ಬಾರಿ ಮಂತ್ರಿ ಸ್ಥಾನ ತಪ್ಪಿದಾಗ ಸಿಎಂ ಯಡಿಯೂರಪ್ಪ ಅವರು ಮನೆಗೆ ಕರೆಸಿ ಹಾಲಾಡಿ ಅವರೊಂದಿಗೆ ಮಾತುಕತೆ ನಡೆಸಿ ಸಿಹಿ ಸುದ್ದಿ ಕೊಡುವುದಾಗಿ ತಿಳಿಸಿದ್ದರು. ಆದರೆ ಕೊಟ್ಟ ಮಾತನ್ನು ಮರೆತ್ತಿದ್ದಾರೆ ಎಂದು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ.