ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಸೆಮಿ ಫೈನಲ್ ಪಂದ್ಯದಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋಲುಂಡು ಕಂಚಿನ ಪದಕಕ್ಕೆ ತೃಪ್ತರಾಗಿದ್ದಾರೆ. ಭಾರತದ ಮೇರಿ ಕೋಮ್ ನಂತರ ಒಲಿಂಪಿಕ್ ಪದಕ ಗಳಿಸಿದ ಎರಡನೇ ಭಾರತೀಯ ಮಹಿಳೆ ಅವರೆನಿಸಿಕೊಂಡಿದ್ದಾರೆ. ಈ ಬಾರಿಯ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ಭಾರತದ ಏಕೈಕ ಬಾಕ್ಸರ್ ಅವರೆನಿಸಿದ್ದಾರೆ.
69 ಕೆಜಿ ವಿಭಾಗದ ಮಹಿಳಾ ಬಾಕ್ಸಿಂಗ್ನ ಸೆಮಿಫೈನಲ್ನಲ್ಲಿ ಎದುರಾಳಿ ಅಗ್ರ ಶ್ರೇಯಾಂಕಿತೆ ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ಧ ಮುಗ್ಗರಿಸಿದ್ದರು.
Advertisement. Scroll to continue reading.