ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಸುನೀಲ್ ಕುಮಾರ್
Published
0
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ನೂತನ ಸಚಿವರು ಇಂದು ರಾಜ ಭವನದ ಗಾಜಿನ ಮನೆಯಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. 29 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಬಾರಿ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 4 ಬಾರಿ ಶಾಸಕರಾಗಿ ಸ್ವಕ್ಷೇತ್ರದಲ್ಲಿ ಅವರ ಕಾರ್ಯ ವೈಖರಿ ಬಗ್ಗೆ ಉತ್ತಮ ಮಾತು ಕೇಳಿ ಬಂದಿವೆ. ಇದೀಗ ಸಚಿವರಾಗಿರುವುದು ಸಹಜವಾಗಿಯೇ ಕಾರ್ಕಳ ಕ್ಷೇತ್ರದ ಅವರ ಅಭಿಮಾನಿಗಳಿಗೆ ಸಂತಸ ತಂದಿದೆ.
ಉಡುಪಿ ಜಿಲ್ಲೆಗೆ ಎರಡು ಸಚಿವ ಸ್ಥಾನ ಸಿಕ್ಕಿದ್ದು ಕೋಟ ಶ್ರೀನಿವಾಸ ಪೂಜಾರಿ ಅವರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದ.ಕ ಜಿಲ್ಲೆಗೆ ಒಂದು ಸಚಿವ ಸ್ಥಾನ ದೊರೆತ್ತಿದ್ದು ಸುಳ್ಯ ಶಾಸಕ ಎಸ್.ಅಂಗಾರ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.