ವರದಿ : ಬಿ.ಎಸ್.ಆಚಾರ್ಯ
ಕಾರ್ಕಳ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಗುಲ್ವಾಡಿಯ ಯುವಕನನ್ನು ಬಂಧಿಸಲಾಗಿದೆ. ಇಮ್ರಾನ್ (24) ಬಂಧಿತ ಯುವಕ. ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ 12 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ದೂರು ಬಂದಿದ್ದು, ಇದರ ಅನುಸಾರ ಅಪ್ರಾಪ್ತ ಬಾಲಕಿಯ ಮನೆಗೆ ಭೇಟಿನೀಡಿ ಆಪ್ತಸಮಾಲೋಚನೆ ನಡೆಸಲಾಗಿದೆ.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು, ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾದ ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕರಾದ ಮದು ಆರೋಪಿಯನ್ನು ಬಂಧಿ ಪೋಕ್ಸೋ ಮತ್ತು ಐ.ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement. Scroll to continue reading.
ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಆಪ್ತಸಮಾಲೋಚಕಿ ಅಂಬಿಕಾ, ಸಮಾಜ ಕಾರ್ಯಕರ್ತ ಯೋಗೀಶ್ , ಕಾರ್ಕಳ ನಗರ ಠಾಣಾ ಸಿಬ್ಬಂದಿಗಳಾದ ಶ್ಯಾಮ್ , ರವೀಂದ್ರ ಇನ್ನಿತರರು ಭಾಗವಹಿಸಿದ್ದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೋ ಅವರ ಆದೇಶದಂತೆ ಅಪ್ರಾಪ್ತ ಬಾಲಕಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಾಗಿದೆ .