ರಾಜ್ಯ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು

0

ನವದೆಹಲಿ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ 9 ತಿಂಗಳಿನಿಂದ ಜೈಲಿನಲ್ಲಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೊನೆಗೂ ಜಾಮೀನು ಸಿಕ್ಕಿದೆ. ಸುಪ್ರೀಂ ಕೋರ್ಟ್ ಇಂದು ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಿ, ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜುಲೈ.27ರಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಂತಹ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ವಕೀಲರು ಸಲ್ಲಿಸಿದ್ದಂತಹ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯ ಪೀಠವು, ಹೈಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದೆ ಎಂಬುದಾಗಿ ಕರ್ನಾಟಕದ ಪರ ವಕೀಲ ನಟರಾಜ್ ಸುಪ್ರೀಂ ಕೋರ್ಟ್ ನ್ಯಾಯಪೀಠದ ಗಮನ ತಂದರು. ಈ ವೇಳೆ ಹೈಕೋರ್ಟ್ ಗೆ ಎರಡು ತಿಂಗಳ ಒಳಗಾಗಿ ಪ್ರಕರಣ ವಿಚಾರಣೆ ನಡೆಸಬೇಕು ಎಂಬುದಾಗಿ ನಿರ್ದೇಶಿಸಿತು.

ಈ ಬಳಿಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ, ಧಾರವಾಡ ಜಿಲ್ಲಾ ವ್ಯಾಪ್ತಿ ಪ್ರವೇಶಿಸದಂತೆ ಷರತ್ತು ವಿಧಿಸಿ, ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com