ಪರ್ಕಳ : ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ವತಿಯಿಂದ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು ಇವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗಣೇಶ್ ಸಣ್ಣಕ್ಕಿಬೆಟ್ಟು, ಅಶೋಕ್ ಸಣ್ಣಕ್ಕಿಬೆಟ್ಟು, ರಾಜೇಶ್ ನಾಯಕ್,ಸುಧಾಕರ ನಾಯಕ್, ಸಂದೀಪ್ ನಾಯ್ಕ್, ಗುರುಪ್ರಸಾದ್, ಕೃಷ್ಣ ನಾಯಕ್, ರವಿರಾಜ್ ಆಚಾರ್ಯ ಉಪಸ್ಥಿತರಿದ್ದರು. ವೇದಿಕೆಯ ಸ್ಥಾಪಕ ಅಧ್ಯಕ್ಷ ಗೋಪಿ ಹೀರೆಬೆಟ್ಟು ಕಾರ್ಯಕ್ರಮ ನಿರೂಪಿಸಿದರು.