ರಾಜ್ಯ

ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿ ಆರಂಭ; ಮಾರ್ಗಸೂಚಿ ಪ್ರಕಟ

0

ಬೆಂಗಳೂರು : ಆಗಸ್ಟ್ 23ರಿಂದ ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಡ ಶಾಲೆಗಳಲ್ಲಿನ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಿ, ಬೋಧನಾ ತರಗತಿಗಳನ್ನು ನಡೆಸಲು, ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. 2021-22ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭ ಕುರಿತಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗಿದ್ದು, ದಿನಾಂಕ 23-08-2021ರಿಂದ ರಾಜ್ಯದಲ್ಲಿ ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 9ನೇ ಮತ್ತು 10ನೇ ತರಗತಿಗಳನ್ನು ಪ್ರಾರಂಭದಲ್ಲಿ ಪ್ರತಿ ದಿನ ಅರ್ಧ ದಿನ ಬೆಳಗಿನ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳನ್ನು ತೆರೆಯಲು ಹಾಗೂ 1 ರಿಂದ 8ನೇ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ನಂತರ ನಿರ್ಧರಿಸಲಾಗುವುದು ಎಂದು ತೀರ್ಮಾನಿಸಲಾಗಿದೆ.

ಆದ್ದರಿಂದ ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಹೆಚ್ಚು ಇರುವ ಜಿಲ್ಲೆಗಳಲ್ಲಿ 1 ರಿಂದ 10ನೇ ತರಗತಿಗಳಿಗೆ ಪರ್ಯಾಯ ವಿಧಾನದಲ್ಲಿ ಕಲಿಕೆ ಮತ್ತು ಬೋಧನಾ ಪ್ರಕ್ರಿಯೆಗಳನ್ನು ಮುಂದುವರೆಸಲು ತಿಳಿಸಲಾಗಿದೆ.

Advertisement. Scroll to continue reading.

ದಿನಾಂಕ 23-08-2021ರಿಂದ ಕೋವಿಡ್-19ರ ಸೋಂಕಿನ ಪ್ರಮಾಣ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಗಳಿಗೆ ಸಂಬಂಧಿಸಿದಂತೆ ಈ ಕೆಳಗಿನಂತೆ ಕ್ರಮವಹಿಸಲು ಸೂಚಿಸಿದೆ.

9 ಮತ್ತು 10ನೇ ತರಗತಿ ಆರಂಭಿಸಲು ಮಾರ್ಗಸೂಚಿ ಕ್ರಮಗಳು

  • ಶೇ.2ಕ್ಕಿಂತ ಕಡಿಮೆ ಸೋಂಕಿನ ಪ್ರಮಾಣ ಇರುವ ಜಿಲ್ಲೆಗಳಲ್ಲಿ 9 ಮತ್ತು 10ನೇ ತರಗತಿಗಳನ್ನು ದಿನಾಂಕ 23-08-2021ರಿಂದ ಪ್ರತಿ ದಿನ ಅರ್ಧ ದಿನ ಬೆಳಗಿನ ಅವಧಿಯಲ್ಲಿ ಭೌತಿಕ ತರಗತಿಗಳನ್ನು ನಡೆಸುವುದು.
  • ಶಾಲೆ ಪ್ರಾರಂಭಿಸಲು ನಿಗಧಿಪಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.
  • ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ. ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳಿರುವುದಿಲ್ಲ ಎಂದು ದೃಢೀಕರಿಸಬೇಕು.
  • 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ಕುಡಿಯುವ ನೀರು, ಉಪಹಾರವನ್ನು ತರುವುದು
  • ಅವಶ್ಯಕತೆ ಅನುಸಾರ ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿನೀರಿನ ವ್ಯವಸ್ಥೆ ಮಾಡುವುದು.
  • ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಅಥವಾ ಪರ್ಯಾಯ ವಿಧಾನದಲ್ಲಿ ಹಾಜರಾಗಬಹುದು.
  • ಶಾಲೆಗೆ ಹಾಜರಾಗಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಈಗ ಅನುಸರಿಸುತ್ತಿರುವ ಆನ್ ಲೈನ್, ಇತರೆ ಪರ್ಯಾಯ ವ್ಯವಸ್ಥೆಯನ್ನು ಮುಂದುವರೆಸಿಕೊಂಡು ಹೋಗಬೇಕು.

ಪ್ರೌಢ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಗಳನ್ನು ನಡೆಸಲು ಸಲಹಾತ್ಮಕ ವೇಳಾಪಟ್ಟಿ

ಭೌತಿಕವಾಗಿ ತರಗತಿಗಳನ್ನು ನಡೆಸಲು ಅವಶ್ಯಕ ದೈಹಿಕ ಅಂತರ ಕಾಪಾಡುವ ದೃಷ್ಠಿಯಿಂದ ಶಾಲಾ ಹಂತದಲ್ಲಿ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶಿಕ್ಷಕರ ಸಂಖ್ಯೆಯನ್ನು ಆಧರಿಸಿ 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳನ್ನು 15 ರಿಂದ 20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿಕೊಂಡು, ಭೌತಿಕ ತರಗತಿಗಳನ್ನು ನಡೆಸುವುದು.

  • ಸೋಮವಾರದಿಂದ ಶುಕ್ರವಾರದವರೆಗೆ – ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30
  • ಶನಿವಾರ – ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.50ರವರೆಗೆ

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com