9 ರಿಂದ 10 ನೇ ತರಗತಿ ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸಿದ್ಧತೆ : ಸಚಿವ ಬಿ.ಸಿ.ನಾಗೇಶ್
Published
0
ಬೆಂಗಳೂರು : ಆಗಸ್ಟ್ 23 ರಿಂದ ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿನ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸಿದ್ಧತೆ ನಡೆಸಲಾಗಿದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಗಸ್ಟ್ 23 ರಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಲಿದ್ದು, ಶಿಕ್ಷಕರಿಗೆ ಬಿಇಒ ಕಚೇರಿಯಲ್ಲಿ ವ್ಯಾಕ್ಸಿನ್ ನೀಡಲು ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಲಸಿಕೆ ಪಡೆಯದ ಶಿಕ್ಷಕರು ಬಿಇಒ ಕಚೇರಿಗೆ ಹೋಗಿ ಲಸಿಕೆ ಪಡೆಯುವಂತೆ ಹೇಳಿದ್ದಾರೆ.
ಕೊರೋನಾ ಮುಂದಿನ ದಿನಗಳ ಜೀವನದ ಒಂದು ಭಾಗವಾಗಲಿದೆ. ಕೊರೊನಾ ಜೊತೆಗೆ ನಾವು ಬದುಕುವುದನ್ನು ಕಲಿಯಬೇಕು. ಒಂದೂವರೆ ವರ್ಷದಿಂದ ಮಕ್ಕಳ ಶಿಕ್ಷಣ ಹೋಗಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ತಜ್ಞರ ಅಭಿಪ್ರಾಯ ಪಡೆದು ಶಾಲೆಗಳ ಆರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.