ಬೆಂಗಳೂರು : ಹೊಸದಾಗಿ ನೇಮಕಗೊಂಡು ಇದುವರೆಗೆ ಕರ್ತವ್ಯಕ್ಕೆ ಹಾಜರಾಗದ ವೈದ್ಯರಿಗೆ ಕೂಡಲೇ ನೋಟಿಸ್ ನೀಡಬೇಕು. ಆದಾಗ್ಯೂ ಹಾಜರಾಗದಿದ್ದರೆ ಅವರ ನೇಮಕಾತಿಯನ್ನು ರದ್ದುಪಡಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಇರುವ ಕಡೆಯ ಸಿಬ್ಬಂದಿ ಹಾಗೂ ವೈದ್ಯರ ನಿಯೋಜನೆಯನ್ನು ರದ್ದುಗೊಳಿಸಬೇಕು. ಕೆಲಸದ ಒತ್ತಡ ಆಧರಿಸಿ ತಾತ್ಕಾಲಿಕವಾಗಿ ಅಗತ್ಯವಿರುವ ಕಡೆಗಳಲ್ಲಿ ಮಾತ್ರ ನಿಯೋಜಿಸಬೇಕು. ಡಯಾಲಿಸಿಸ್ ಚಿಕಿತ್ಸೆಗೆ ದೊರಕದಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದಲ್ಲಿ ಒಂದೆರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು.
ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು :
ಗಡಿ ಜಿಲ್ಲೆಯಾಗಿರುವುದರಿಂದ ತೀವ್ರ ನಿಗಾವಹಿಸಬೇಕು. ಎಲ್ಲಿ ಸೋಂಕು ಕಂಡುಬರುತ್ತದೆಯೋ ಅಂತಹ ಪ್ರದೇಶಗಳಲ್ಲಿ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.
Advertisement. Scroll to continue reading.
ಗಡಿಭಾಗದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಬೇಕು. ರೈಲು ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಆರಂಭಿಸಬೇಕು. ಮುಂದಿನ ಹತ್ತರಿಂದ ಹದಿನೈದು ದಿನಗಳಲ್ಲಿ ಆಕ್ಸಿಜನ್ ಘಟಕಗಳು ಕಾರ್ಯಾರಂಭಿಸಬೇಕು ಎಂದರು.
ಒಂದು ಕೋಟಿ ಲಸಿಕೆ ಪೂರೈಕೆಗೆ ಮನವಿ :
ಪ್ರತಿ ದಿನ ಐದು ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಒಂದು ಕೋಟಿ ಲಸಿಕೆಗಳನ್ನು ಪೂರೈಸಲು ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಲಸಿಕೆ ಬಳಕೆಯನ್ನು ಆಧರಿಸಿ ಲಸಿಕೆ ಪೂರೈಕೆ ಮಾಡುವುದರಿಂದ ಪ್ರತಿ ಜಿಲ್ಲೆಯಲ್ಲಿ ಸಾಮಥ್ರ್ಯಕ್ಕೆ ಅನುಗುಣವಾಗಿ ಗರಿಷ್ಠ ಲಸಿಕೆ ನೀಡಲು ಕ್ರಮ ತೆಗೆದುಕೊಳ್ಳಬೇಕು. ದೈನಂದಿನ ಲಸಿಕಾ ಪ್ರಮಾಣ ಆಧರಿಸಿ ಲಸಿಕೆಯನ್ನು ಪೂರೈಸಲಾಗುವುದು. ಆದ್ದರಿಂದ ಲಸಿಕೆ ಪೂರೈಕೆಯಾದ ತಕ್ಷಣವೇ ಅವುಗಳನ್ನು ಜನರಿಗೆ ನೀಡಬೇಕು ಎಂದರು.
Advertisement. Scroll to continue reading.