ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಇರಾನ್ ನಲ್ಲಿ ಉಕ್ರೇನ್ ರಕ್ಷಣಾ ವಿಮಾನವನ್ನು ಅಪಹರಣ ಮಾಡಲಾಗಿದೆ ಎಂದು ತಿಳಿದು ಬಂದಿದೆ. 98 ಜನರಿದ್ದ ಉಕ್ರೇನ್ ವಿಮಾನವನ್ನು ಹೈಜಾಕ್ ಮಾಡಲಾಗಿದ್ದು, ಸದ್ಯ ಕಾಬೂಲ್ ಏರ್ ಪೋರ್ಟ್ ನಲ್ಲಿ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಬಂದ್ ಮಾಡಲಾಗಿದೆ. ಅಪ್ಘಾನಿಸ್ತಾನದಿಂದ ಭಾರತಕ್ಕೆ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಕಾಬೂಲ್ ಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ಬಂದ್ ಆಗಿದೆ.