ಮೈಸೂರು : ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಇದೇ ಮೊದಲ ಬಾರಿಗೆ ಬಿಜೆಪಿ ಪಾಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ಸುನದ ಪಾಲನೇತ್ರ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್, JDS ಮೈತ್ರಿಯ ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇಗೌಡ ಸದಸ್ಯತ್ವ ರದ್ದಾದ ಹಿನ್ನೆಲೆ ಇಂದು ಚುನಾವಣೆ ನಡೆದಿದೆ.
ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಅವರಿಗೆ 26 ಮತಗಳು ಸಿಕ್ಕರೆ, ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿಗೆ 22 ಮತಗಳು ಸಿಕ್ಕಿವೆ. ಈ ಮೂಲಕ ಇದೇ ಮೊದಲ ಬಾರಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ ಬಿಜೆಪಿಗೆ ಸಿಕ್ಕಿದೆ.
Advertisement. Scroll to continue reading.