ಉಡುಪಿ : ಯುವಕನಿಂದ ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಯುವಕ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.
ಸಂತೆಕಟ್ಟೆ ಸಮೀಪದ ಕಕ್ಕುಂಜೆ ನಿವಾಸಿ ಸೌಮ್ಯ ಭಂಡಾರಿ ಮೃತರಾದ ಯುವತಿ. ಸಂದೇಶ್ ಕುಲಾಲ್ ಗಂಭೀರವಾಗಿ ಗಾಯಗೊಂಡವ. ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಯುವತಿಗೆ ಇತ್ತೀಚೆಗಷ್ಟೇ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಇದೇ ವಿಚಾರವಾಗಿ ಯುವಕ ಯುವತಿಗೆ ಇಂದು ಸಂಜೆ ಚಾಕು ಇರಿದಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
Advertisement. Scroll to continue reading.