ಬೆಂಗಳೂರು : ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿ ಗಾಯತ್ರಮ್ಮ , ಹಾಗೂ ಕಿರಿಯ ಸಹಾಯಕಿ ಸುಜಾತಮ್ಮ ಅಮಾತುಗೊಂಡ ಸಿಬ್ಬಂದಿಗಳಾಗಿದ್ದು, ಇವರುಗಳು ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟ ಉಂಟಾಗಲು ಕಾರಣಕರ್ತರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಈ ಮೂವರು ಸಿಬ್ಬಂದಿ ಬೇರೆ, ಬೇರೆ ಐ ಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐ ಡಿ ಗಳನ್ನು ಉಪಯೋಗಿಸಿ ವಂಚನೆ ಎಸಗಿರುವುದು ದೃಢ ವಾಗಿರುವುದರಿಂದ ಹಾಗೂ 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966-00 ಗಳಷ್ಟು ಮೊತ್ತ ಕಂಪನಿಗೆ ನಷ್ಟವಾಗಿರುವುದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಜೊತೆಗೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಯನ್ನು ಸಹ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Advertisement. Scroll to continue reading.