ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಅವರು ಆಯ್ಕೆ ಮಾಡಲಾಗಿದೆ. ನೂತನ ಸಿಎಂ ಆಯ್ಕೆ ಸಂಬಂಧ ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ.
ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್ ನೂತನ ಸಿಎಂ ಆಯ್ಕೆಯನ್ನು ಘೋಷಿಸಿದರು.
ಬಿ ಎಲ್ ಪಿ ಸಭೆಯಲ್ಲಿ ವಿಜಯ್ ರೂಪಾನಿ ಅವರು ಸಿಎಂ ಆಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ತಮ್ಮ ನಿಲುವು ಸೂಚಿಸಿದರು. ಆ ಬಳಿಕ ಇತರರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಬಿಎಲ್ ಪಿ ಸಭೆಯ ನಂತರ ಬಿಜೆಪಿ ಹಿರಿಯ ನಾಯಕರು ಮಹತ್ವದ ಸಭೆ ನಡೆಸಿದ್ದು, ಆ ಬಳಿಕ ನೂತನ ಸಿಎಂ ಹೆಸರನ್ನು ಪ್ರಕಟಿಸಲಾಗಿದೆ.
Advertisement. Scroll to continue reading.
ನಿನ್ನೆ ದಿಢೀರ್ ರಾಜಕೀಯ ವಿದ್ಯಮಾನದಲ್ಲಿ ಸಿಎಂ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದರು.