ಕರಾವಳಿ

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡೀಸ್ ನಿಧನಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಸಂತಾಪ

0

ವರದಿ : ದಿನೇಶ್ ರಾಯಪ್ಪನಮಠ

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕರಾದ ಶ್ರೀ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಸಂತಾಪ ಸೂಚಿಸಿದ್ದಾರೆ.

ಸರಳ ಸಜ್ಜನ ನಾಯಕರಾಗಿ ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು ಉಡುಪಿ ಸಂಸದರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅವರ ಸೇವೆ ಸ್ಮರಣೀಯ ಎಂದು ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.

Advertisement. Scroll to continue reading.

ದೇವರು ಅವರಿಗೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಬಂಧು-ಮಿತ್ರರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com