ಕರಾವಳಿ

ಉಡುಪಿ: ಸೆ. 30 ರಂದು ಮೆಗಾ ಲೋಕ್ ಅದಾಲತ್

0

ಉಡುಪಿ: ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಅಕ್ಟೋಬರ್ 23 ರಂದು ನಿಗದಿಪಡಿಸಲಾಗಿದ್ದ ಮೆಗಾ ಲೋಕ್ ಅದಾಲತ್‍ನ್ನು ಸೆಪ್ಟೆಂಬರ್ 30 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದೆ.
ವೈವಾಹಿಕ ಪ್ರಕರಣ, ಕುಟುಂಬ ಕಲಹ, ಚೆಕ್ ಬೌನ್ಸ್, ವಾಹನ ಅಪಘಾತ ಹಾಗೂ ವಿಮಾ ಪ್ರಕರಣ ಸೇರಿದಂತೆ ರಾಜಿ ಸಂಧಾನದ ಮೂಲಕ ಬಗೆಹರಿಸಬಲ್ಲ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಇತ್ಯರ್ಥಪಡಿಸಲಾಗುವುದು. ಅಕ್ರಮ ಮರಳು ಮತ್ತು ಕಲ್ಲು ಸಾಗಾಣಿಕೆ ಮಾಡುವಾಗ ಜಪ್ತಿ ಮಾಡಿದ ವಾಹನಗಳನ್ನು ದಂಡ ಕಟ್ಟುವ ಮೂಲಕ ಲೋಕ್ ಅದಾಲತ್ ನಲ್ಲಿ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು. ನ್ಯಾಯಾಧೀಶರು, ವಿವಿಧ ಇಲಾಖೆಯ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸುವರು. ಕೋವಿಡ್ ಸಂದರ್ಭದಲ್ಲಿ ಲೋಕ್ ಅದಾಲತ್ ಮೂಲಕ ಹಲವು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಲಾಗಿದೆ.
ಕಳೆದ ಆಗμï್ಟ ನಲ್ಲಿ ನಡೆದ ಲೋಕ್ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ 3065 ಪ್ರಕರಣಗಳು ಹಾಗೂ 179 ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಲಾಗಿದೆ. ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಪ್ರತೀ ದಿನ ಎಲ್ಲಾ ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್ ಗಳು ನಡೆಯುತ್ತವೆ. ಕಕ್ಷಿದಾರರು ನ್ಯಾಯಾಲಯದಲ್ಲಿ ವಿಚಾರಣೆಗೆ ಇರುವ ಪ್ರಕರಣಗಳನ್ನು ತಮ್ಮ ವಕೀಲರ ಮೂಲಕ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಾಯವಾಣಿ ಮೂಲಕ ಮಾಹಿತಿ ಪಡೆದು ಲೋಕ್ ಅದಾಲತ್ ನಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ.
ಎರಡೂ ಕಡೆಯ ಪಕ್ಷಗಾರರು ಪರಸ್ಪರ ರಾಜೀ ಮೂಲಕ ತಮ್ಮ ವಿವಾದಗಳನ್ನು ಬಗೆಹರಿಸಿಕೊಂಡಲ್ಲಿ ಭಾಂದವ್ಯವು ಉಳಿದು ವಿವಾದವು ಇತ್ಯರ್ಥವಾಗುತ್ತದೆ. ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಕಕ್ಷಿದಾರರು ಆನ್ ಲೈನ್, ವೀಡಿಯೋ ಕಾನ್ಪರೆನ್ಸ್ ಹಾಗೂ ಎಲೆಕ್ಟಾನಿಕ್ ಮಾಧ್ಯಮಗಳ ಮೂಲಕ ಹಾಗೂ ಖುದ್ದಾಗಿ ಹಾಜರಾಗುವ ಮೂಲಕ ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಆಯಾ ತಾಲೂಕಿನ ಕಾನೂನು ಸೇವಾ ಸಮಿತಿ ಮತ್ತು ದೂರವಾಣಿ ಸಂಖ್ಯೆ: 0820-2523355 ನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಸಮಿತಿ ಉಡುಪಿ ಅವರ ಪ್ರಕಟಣೆ ತಿಳಿಸಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com