ಕುಂದಾಪುರ : ಬಂಟರ ಸಂಘದ ವತಿಯಿಂದ ಗ್ರಾಮ ಪಂಚಾಯತ್ ಸದಸ್ಯರು,ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ
Published
0
ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ 2021-25 ರ ಅವಧಿಗೆ ಆಯ್ಕೆಗೊಂಡು ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಬಂಟ ಸಮುದಾಯವನ್ನು ಪ್ರತಿನಿಧಿಸುವ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕೋವೀಡ್ -19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಹಂತದಲ್ಲಿ ಅವಿರತವಾಗಿ ಶ್ರಮಿಸಿದ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ ಕುಂದಾಪುರ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟಗಳ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೆರವೇರಿಸಿದರು.ಯುವ ಬಂಟರ ಸಂಘದ ಅಧ್ಯಕ್ಷ ಸುನೀಲ್ ಹೇರಿಕುದ್ರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರು, ಧಾರ್ಮಿಕ ಮುಕಂಡರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಗ್ರಾಮ ಪಂಚಾಯತ್ ಸದಸ್ಯರನ್ನು ಅಭಿನಂದಿಸಿದ್ದಾರೆ. ಅಮೃತ ಪಿ ಶೆಟ್ಟಿ ಉಪಾಧ್ಯಕ್ಷರು ಬಂಟರ ಸಂಘ ಇವರು ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸಿದರು.
Advertisement. Scroll to continue reading.
ಕಾರ್ಯಕ್ರಮದಲ್ಲಿ ಉಪೇಂದ್ರ ಶೆಟ್ಟಿ ಜಪ್ತಿ ಅಧ್ಯಕ್ಷರು ಬಂಟರ ಸಂಘ ಬೆಂಗಳೂರು, ಇಂದ್ರಾಳಿ ಜಯಕರ ಶೆಟ್ಟಿ ಪ್ರಧಾನ ಕಾರ್ಯದರ್ಶಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ,ಉಳ್ತೂರು ಮೋಹನ್ ದಾಸ್ ಶೆಟ ಕೋಶಾಧಿಕಾರಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ,ಆವರ್ಸೆ ಸುಧಾಕರ ಶೆಟ್ಟಿ ಸಂಚಾಲಕರು ಬಂಟರ ಯಾನೆ ನಾಡವರ ಮಾತೃ ಸಂಘ ಮೊದಲಾದವರು ಉಪಸ್ಥಿತರಿದ್ದರು.