ವರದಿ : ದಿನೇಶ್ ರಾಯಪ್ಪನಮಠ
ಗಂಗೊಳ್ಳಿ : ಇಡೀ ಜಗತ್ತೇ ಮೆಚ್ಚುವಂತಹ ನಾಯಕ, ನಮ್ಮ ದೇಶ ಕಂಡ ಅತ್ಯುತ್ತಮ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಬೈಂದೂರು ಕ್ಷೇತ್ರದಾದ್ಯಂತ ವಿವಿಧ ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಯಶಸ್ವಿಯಾಗಿ ಮಾಡಲಾಗಿದೆ. ಅರಾಟೆಯ ಪುಣ್ಯಕ್ಷೇತ್ರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರವನ್ನು ಸ್ವಚ್ಛಗೊಳಿಸುವ ಮೂಲಕ ಒಂದು ಉತ್ತಮ ಪುಣ್ಯದ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಿದ್ದಾರೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.
ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೧ನೇ ಹುಟ್ಟು ಹಬ್ಬದ ಅಂಗವಾಗಿ ಸೇವೆ ಮತ್ತು ಸಮರ್ಪಣಾ ಅಭಿಯಾನದ ಭಾಗವಾಗಿ ಹೊಸಾಡು ಗ್ರಾಮದ ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಠಾರದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ರಮೇಶ ಆಚಾರ್ಯ ಅರಾಟೆ, ಹಿರಿಯರಾದ ಎಂ.ಎ. ಸುವರ್ಣ, ಜಿಲ್ಲಾ ಬಿಜೆಪಿ ಕರ್ಯಕಾರಿಣಿ ಸದಸ್ಯ ಹರೀಶ್ ಮೇಸ್ತ ಗುಜ್ಜಾಡಿ, ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಗೋಪಾಲಕೃಷ್ಣ ನಾಡ, ರಾಮಚಂದ್ರ ನಾವಡ, ಹರೀಶ್ ಶೆಟ್ಟಿ ದೇವಲ್ಕುಂದ, ರಾಘವೇಂದ್ರ ಆಚಾರ್ಯ ಅರಾಟೆ, ನಾಗರಾಜ ಮೊಗವೀರ ಅರಾಟೆ, ಮಿಥುನ್ ದೇವಾಡಿಗ ತ್ರಾಸಿ, ರವೀಂದ್ರ ಖಾರ್ವಿ, ಗ್ರಾಪಂ ಸದಸ್ಯರು, ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.
ಪೋಟೋ ಪೈಲ್ ನೇಮ್ : ೨೭ಜಿಎಎನ್೫ (ಸೇವೆ ಮತ್ತು ಸಮರ್ಪಣಾ ಅಭಿಯಾನದ ಭಾಗವಾಗಿ ಜರಗಿದ ಹೊಸಾಡು ಗ್ರಾಮದ ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವಠಾರದ ಸ್ವಚ್ಛತಾ ಕಾರ್ಯದಲ್ಲಿ ಶಾಸಕ ಸುಕುಮಾರ್ ಶೆಟ್ಟಿ ಪಾಲ್ಗೊಂಡು ಮಾತನಾಡಿದರು)
Advertisement. Scroll to continue reading.