ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದ್ದು, ಈ ಬಾರಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಉದ್ಘಾಟಿಸಲಿದ್ದಾರೆ.
ಇಂದು (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು.
ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದು, ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ದಸರಾ ಹಬ್ಬದ ಸಿದ್ಧತೆ ಕುರಿತ ಇಂದಿನ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ತಿಳಿಸಿದ್ದಾರೆ.
Advertisement. Scroll to continue reading.