ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷೆಯ ‘ಪುಷ್ಪ’ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಅವರ ಫಸ್ಟ್ ಲುಕ್ ಇಂದು ಬಿಡುಗಡೆ ಆಗಿದೆ. ರಶ್ಮಿಕಾ ಮಂದಣ್ಣ ಹೊಸ ಗೆಟಪ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ರಶ್ಮಿಕಾ ಲುಕ್ ವಿಭಿನ್ನವಾಗಿದೆ.
ಚಿತ್ರದಲ್ಲಿ ಶ್ರೀವಲ್ಲಿ ಎಂಬ ಹಳ್ಳಿ ಹುಡುಗಿಯ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದು, ಫಹಾದ್ ಫಾಸಿಲ್, ಡಾಲಿ ಧನಂಜಯ್, ಅನಸೂಯ ಭಾರದ್ವಾಜ್, ಜಗಪತಿ ಬಾಬು, ಪ್ರಕಾಶ್ ರಾಜ್ ಮೊದಲಾದವರು ಪಾತ್ರವಾಗಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಅಂದಹಾಗೆ ಚಿತ್ರ ಕ್ರಿಸ್ಮಸ್ ಗೆ ತೆರೆಗೆ ಬರಲಿದೆ.
Advertisement. Scroll to continue reading.