ಬೆಂಗಳೂರು : ನಗರದ ಮಲ್ಲೇಶ್ವರಂನಲ್ಲಿರುವಂತ ಮಂತ್ರಿ ಮಾಲ್ ಆಸ್ತಿ ತೆರಿಗೆ ಬಾಕಿ ಪಾವತಿಸಿಲ್ಲ ಎಂಬುದಾಗಿ ಬಿಬಿಎಂಪಿ ಅಧಿಕಾರಿಗಳು ಮಾಲ್ ಗೆ ಬೀಗ ಜಡಿದಿದ್ದರು. ಇದರಿಂದ ಎಚ್ಚೆತ್ತುಕೊಂಡಂತ ಮಂತ್ರಿ ಮಾಲ್ ಆಸ್ತಿ ತೆರಿಗೆ ಬಾಕಿಯ ಪಾವತಿಗಾಗಿ 5 ಕೋಟಿ ಡಿಡಿ ನೀಡಿದೆ ಎಂದು ತಿಳಿದು ಬಂದಿದೆ.
ಇಂದು ಬಿಬಿಎಂಪಿಯ ಅಧಿಕಾರಿಗಳು ಮಂತ್ರಿಮಾಲ್ ಆಸ್ತಿ ತೆರಿಗೆ ಪಾವತಿ ಮಾಡದ ಕಾರಣ, ಮಂತ್ರಿ ಮಾಲ್ ಗೆ ಬೀಗ ಜಡಿದಿದ್ದರು. ಇದರಿಂದಾಗಿ ಎಚ್ಚೆತ್ತುಕೊಂಡ ಮಂತ್ರಿ ಮಾಲ್ ಆಡಳಿತ ಮಂಡಳಿಯು 27 ಕೋಟಿ ಬಾಕಿ ಆಸ್ತಿ ತೆರಿಗೆ ಹಣದಲ್ಲಿ ರೂ.5 ಕೋಟಿ ಹಣವನ್ನು ಡಿಡಿ ರೂಪದಲ್ಲಿ ಪಾವತಿಸಿದೆ. ಬಾಕಿ ಹಣವನ್ನು ಪಾವತಿಸೋದಾಗಿ ತಿಳಿಸಿದೆ ಎಂದು ತಿಳಿದುಬಂದಿದೆ.
2017ರ ಬಳಿಕ ಮಂತ್ರಿ ಮಾಲ್ ಇಲ್ಲಿಯವರೆಗೆ ಆಸ್ತಿ ತೆರಿಗೆಯನ್ನು ಪಾವತಿಸಿರಲಿಲ್ಲ. ಇದರಿಂದಾಗಿ ಬಡ್ಡಿ ಸಹಿತ 37 ಕೋಟಿಯಷ್ಟು ಆಸ್ತಿ ತೆರಿಗೆ ಬಾಕಿ ಉಳಿದಿತ್ತು. ಹೀಗಾಗಿ ಬಾಕಿ ಆಸ್ತಿ ತೆರಿಗೆ ಪಾವತಿಸುವಂತೆ ಇಂದು ಬಿಬಿಎಂಪಿ ಅಧಿಕಾರಿಗಳು ಮಂತ್ರಿಮಾಲ್ ಗೆ ಬೀಗ ಹಾಕಿದ ಬಳಿಕ ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ 5 ಕೋಟಿ ಆಸ್ತಿ ತೆರಿಗೆ ಪಾವತಿಸಿದೆ.
Advertisement. Scroll to continue reading.