ಬ್ರಹ್ಮಾವರ : ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಮಹಿಳಾ ವಿಚಾರಗೋಷ್ಠಿ
Published
0
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ ) ಬ್ರಹ್ಮಾವರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಗುಂಡ್ಮಿ ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಭಗವತಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಶಿಕ್ಷಕ ರಾಮಚಂದ್ರ ಐತಾಳ್ ಉದ್ಘಾಟಿಸಿದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ನಾಗರತ್ನ ಹೇರಳೆ ಯವರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆ ಮತ್ತು ಪುರುಷರ ಪಾತ್ರ ಏನು? ಮಕ್ಕಳಿಗೆ ಸಂಸ್ಕಾರವನ್ನು ನೀಡುವಲ್ಲಿ ತಾಯಿಯ ಪಾತ್ರ ಏನು? ಮಕ್ಕಳನ್ನು ಹೆಣ್ಣು ಮತ್ತು ಗಂಡು ಎಂಬ ಭೇದಭಾವವಿಲ್ಲದೆ ಬೆಳೆಸಬೇಕು ಎಂದು ಹೇಳಿದರು. ಲ ಬ್ರಹ್ಮಾವರ ತಾಲೂಕು ಯೋಜನಾಧಿಕಾರಿ ದಿನೇಶ್ ಶೇರಿಗಾರ್ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತಾ ಸದಸ್ಯರು ವ್ಯವಹಾರದಲ್ಲಿ ಶಿಸ್ತನ್ನು ಯಾವ ರೀತಿ ಬೆಳೆಸಿಕೊಳ್ಳಬೇಕು ಎಂಬುದರ ಬಗ್ಗೆ ಅರಿವು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಕನಕ ವಹಿಸಿದ್ದರು.
Advertisement. Scroll to continue reading.
ಕಾರ್ಯಕ್ರಮದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ, ವಲಯದ ಅಧ್ಯಕ್ಷರಾದ ರಾಧಾ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ನೇತ್ರಾವತಿ ನಿರೂಪಿಸಿ, ವಲಯದ ಮೇಲ್ವಿಚಾರಕರಾದ ನಾಗೇಂದ್ರ ಸ್ವಾಗತಿಸಿ, ಶಶಿಕಲಾ ವಂದಿಸಿದರು