ಡ್ರಗ್ಸ್ ಪ್ರಕರಣದಲ್ಲಿ ಸದ್ಯ ಎನ್‌ಸಿಬಿ ವಶದಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ʼನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಮುಂಬೈನ ಕಿಲ್ಲಾ ನ್ಯಾಯಾಲಯ ಆದೇಶಿಸಿದೆ. ಎನ್‌ಸಿಬಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಮುಂಬೈನ ಕಿಲ್ಲಾ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರು ಪಡೆಸಲಾಗಿದ್ದು, ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಶಾರುಖ್ ಪುತ್ರ ಅರ್ಯನ್ ಸೇರಿ ಮತ್ತೆ 8 ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ವಿಚಾರಣೆಯಿನ್ನು ಬಾಕಿ ಇದೆ. ಹಾಗಾಗಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ 4 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡವಂತೆ ಎನ್‌ಸಿಬಿ ಕೋರ್ಟ್ ಬಳಿ ಮನವಿ ಮಾಡಿತ್ತು. ನ್ಯಾಯಾಲಯ, ಆರ್ಯನ್ ಸೇರಿ 8 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
Advertisement. Scroll to continue reading.