ಕರಾವಳಿ

ಮಂಗಳೂರು : ಭಾವನೆಗಳಿಗೆ ಧಕ್ಕೆ ಆದಾಗ ಆ್ಯಕ್ಷನ್, ರಿಯಾಕ್ಷನ್ ಇರುತ್ತದೆ : ಸಿಎಂ ಬೊಮ್ಮಾಯಿ

0

ಮಂಗಳೂರು : ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.

ಈ ಸಂದರ್ಭ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕರಾವಳಿಯಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ಬಗ್ಗೆ ಮಾತನಾಡಿದ ಅವರು, ಸಮಾಜದಲ್ಲಿ ಹಲವಾರು ಭಾವನೆಗಳಿದ್ದು, ಇವುಗಳಿಗೆ ಧಕ್ಕೆಯಾಗದ ಹಾಗೆ ಸೌಹಾರ್ದತೆಯಿಂದ ನಾವು ಬದುಕಬೇಕಾಗುತ್ತದೆ. ಆದರೆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಆ್ಯಂಡ್ ರಿಯಾಕ್ಷನ್ ನಡೆಯುತ್ತವೆ. ಕಾನೂನು ಸುವ್ಯವಸ್ಥೆ ಜತೆಗೆ ಸಾಮಾಜಿಕ ಸಾಮರಸ್ಯ ಕಾಪಾಡುವುದು ಸರಕಾರದ ಕರ್ತವ್ಯವಾಗಿದ್ದು, ಯುವಕರು ಕೂಡ ಸಾಮಾಜಿಕ ಸಾಮಸ್ಯಕ್ಕೆ ಧಕ್ಕೆಯಾಗದ ಹಾಗೆ ನೋಡಿಕೊಳ್ಳಬೇಕು. ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕಲು ಸಾಧ್ಯವಿಲ್ಲ. ಶಾಂತಿ ಸುವ್ಯವಸ್ಥೆ ನಮ್ಮ ನೈತಿಕತೆಯನ್ನು ಅವಲಂಬಿಸಿ ಇದೆ  ಎಂದರು.

ಶಾಲಾರಂಭದ ಕುರಿತು ತಜ್ಞರ ಜೊತೆ ಸಭೆ:

Advertisement. Scroll to continue reading.

ದಸರಾ ಮುಗಿದ ಬಳಿಕ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸುವ ಸಂಬಂಧ ತಜ್ಞರ ಜೊತೆಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ದಸರಾ ಮುಗಿದ ಬಳಿಕ ಕೋವಿಡ್ ತಜ್ಞರ ಸಭೆ ಕರೆಯಲಾಗುವುದು. ಗಡಿ ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧಗಳನ್ನು ಸಡಿಲಮಾಡುವ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು

2 ರಿಂದ 18 ವರ್ಷಗಳ ವಯೋಮಾನದವರಿಗೆ ಕೋವಿಡ್ ಲಸಿಕೆ ಹಾಕುವ ಕುರಿತು ಪ್ರಯೋಗ ಕೊನೆಯ ಹಂತದಲ್ಲಿದ್ದು, ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಮಕ್ಕಳು ಮತ್ತು ಯುವಕರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com