ಪ್ರಧಾನಿ ನರೇಂದ್ರ ಮೋದಿ ನೂತನ ಗತಿ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಮುಂದಿನ 25 ವರ್ಷಗಳಿಗೆ ನಾವು ಅಡಿಪಾಯ ಹಾಕುತ್ತಿದ್ದೇವೆ. ಈ ರಾಷ್ಟ್ರೀಯ ಮಾಸ್ಟರ್ ಪ್ಲಾನ್ 21 ನೇ ಶತಮಾನದ ಅಭಿವೃದ್ಧಿ ಯೋಜನೆಗಳಿಗೆ ‘ಗತಿಶಕ್ತಿ’ ನೀಡುತ್ತದೆ ಮತ್ತು ಈ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಸಹಾಯ ಮಾಡುತ್ತದೆ ಎಂದು ಎಂದರು.
ಈ ಯೋಜನೆಯು ಸುಮಾರು 100 ಲಕ್ಷ ಕೋಟಿ ಮೌಲ್ಯದ ಮೂಲಸೌಕರ್ಯ ಯೋಜನೆಗಳ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಇದರ ಅಡಿಯಲ್ಲಿ, 16 ಸಚಿವಾಲಯಗಳು ಮತ್ತು ಇಲಾಖೆಗಳು ಆ ಎಲ್ಲ ಯೋಜನೆಗಳನ್ನು ಜಿಐಎಸ್ ಮೋಡ್‌ನಲ್ಲಿ ಇರಿಸಿದ್ದು, ಇವುಗಳನ್ನು 2024-25 ರೊಳಗೆ ಪೂರ್ಣಗೊಳಿಸಲಾಗುವುದು.
ಪಿಎಂ-ಗತಿಶಕ್ತಿ ಯೋಜನೆ ಬಹು-ಮಾದರಿ ಸಂಪರ್ಕವು ಜನರು, ಸರಕು ಮತ್ತು ಸೇವೆಗಳನ್ನು ಒಂದು ಸಾರಿಗೆ ವಿಧಾನದಿಂದ ಇನ್ನೊಂದಕ್ಕೆ ಸಾಗಿಸಲು ಸಮಗ್ರ ಮತ್ತು ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ. ಇದು ಮೂಲಸೌಕರ್ಯದ ಅಂತಿಮ ಗಮ್ಯಸ್ಥಾನ ಸಂಪರ್ಕವನ್ನು ಸುಗಮಗೊಳಿಸಲು ಮತ್ತು ಜನರಿಗೆ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Advertisement. Scroll to continue reading.
ಇದು ಮುಂಬರುವ ಸಂಪರ್ಕ ಯೋಜನೆಗಳು, ಇತರೆ ವ್ಯಾಪಾರ ಕೇಂದ್ರಗಳು, ಕೈಗಾರಿಕಾ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪರಿಸರದ ಬಗ್ಗೆ ಜನರು ಮತ್ತು ವ್ಯಾಪಾರ ಸಮುದಾಯ ಜನರಿಗೆ ಮಾಹಿತಿಯನ್ನು ಒದಗಿಸಲಿದೆ. ಇದು ಹೂಡಿಕೆದಾರರಿಗೆ ತಮ್ಮ ವ್ಯಾಪಾರವನ್ನು ಸೂಕ್ತ ಸ್ಥಳಗಳಲ್ಲಿ ಯೋಜಿಸಲು ಸಹಾಯ ಮಾಡಲಿದೆ.
ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯ ಮೂಲಕ ದೇಶದ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿ ಹೊಂದಲಾಗಿದೆ. ಈ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ ಮತ್ತು ಮೂಲಸೌಕರ್ಯದ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಯ ಮೂಲಕ ಸ್ಥಳೀಯ ಉತ್ಪಾದಕರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವ ಗುರಿ ಇದೆ. ಇದು ಕೈಗಾರಿಕೆಗಳ ಅಭಿವೃದ್ಧಿಗೆ ಕಾರಣವಾಗಲಿದೆ.
Advertisement. Scroll to continue reading.