ಮಂಗಳೂರು : ನಕ್ಸಲ್ ರೊಂದಿಗೆ ನಂಟು ಹೊಂದಿದ್ದಾರೆ ಎಂಬ ಆರೋಪದಡಿ ಬಂಧಿತರಾಗಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದ ವಿಠಲ ಮಲೆಕುಡಿಯ ಪ್ರಕರಣದ ವಿಚಾರಣೆ ನಡೆದಿದ್ದು, ಅವರು ಹಾಗೂ ಅವರ ತಂದೆ ಲಿಂಗಣ್ಣ ನಿರ್ದೋಷಿ ಎಂದು ಮೂರನೇ ಹೆಚ್ಚುವರಿ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ.ಜಕಾತಿ ಈ ಮಹತ್ವದ ತೀರ್ಪು ನೀಡಿದೆ.
ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿ ವಿಠಲ ಮಲೆಕುಡಿಯ ಅವರನ್ನು 2012 ರ ಮಾರ್ಚ್ 3 ರಂದು ನಕ್ಸಲ್ ನಿಗ್ರಹ ದಳ ಬಂಧಿಸಿತ್ತು. ಬಳಿಕ ಸಲ್ಲಿಸಲಾಗಿದ್ದ ದೋಷಾರೋಪ ಪಟ್ಟಿಯಲ್ಲಿ ವಿಠಲ ಮಲೆಕುಡಿಯ ಅವರನ್ನು 6 ನೇ ಆರೋಪಿಯನ್ನಾಗಿ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು 7ನೇ ಆರೋಪಿಯನ್ನಾಗಿಸಲಾಗಿತ್ತು. ಈ ವೇಳೆ ವಿಠಲ ಮಲೆಕುಡಿಯ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದರು.
Advertisement. Scroll to continue reading.