ಕೋಟ : ಸಾಲಿಗ್ರಾಮ ದೇವಳದ ಟ್ರಸ್ಟಿ ನೇತೃತ್ವದಲ್ಲಿ ಸಚಿವರಿಗೆ ಸನ್ಮಾನ
Published
0
ವರದಿ : ದಿನೇಶ್ ರಾಯಪ್ಪನಮಠ
ಕೋಟ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಹಾಗೂ ಬೆಂಗಳೂರಿನ ಉದ್ಯಮಿ ಗಣಪತಿಯ್ಯ ನೇತೃತ್ವದಲ್ಲಿ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಭಾ.ಜ.ಪ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕರ್ನಾಟಕ ಧಾರ್ಮಿಕ ಪರಿಷತ್ತಿನ ಸದಸ್ಯ ಡಾ.ಮಹರ್ಷಿ ಆನಂದ ಗುರೂಜಿಯವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ಮಾಜಿ ಕಾರ್ಯದರ್ಶಿ ಮಂಜುನಾಥ ಉಪಾಧ್ಯ, ಪ್ರಸನ್ನ ತುಂಗ, ಚಂದ್ರಶೇಖರ್ ಉಪಾಧ್ಯ, ಕೂಟ ಮಹಾಜಗತ್ತಿನ ಮಾಜಿ ಅಧ್ಯಕ್ಷ ವೆಂಕಟರಾವ್, ನಿವೃತ್ತ ಶಿಕ್ಷಕ ರಾಮಚಂದ್ರ ಐತಾಳ್, ಉದಯ ಮಯ್ಯ ಮತ್ತಿತರರು ಉಪಸ್ಥಿತರಿದ್ದರು.