ಮುಂಬೈ: ಎನ್ ಸಿ ಬಿಯಿಂದ ಅಕ್ಟೋಬರ್ 2 ರಂದು ಬಂಧಿಸಲ್ಪಟ್ಟಿದ್ದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಇಂದು ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಸೂಪರ್ಸ್ಟಾರ್ ಶಾರುಖ್ ಖಾನ್ ಮತ್ತು ಗೌರಿ ಖಾನ್ ಶನಿವಾರ ಬೆಳಿಗ್ಗೆ ಆರ್ಥರ್ ರೋಡ್ ಜೈಲಿಗೆ ತೆರಳಿ ಮಗ ಬಿಡುಗಡೆಗಾಗಿ ಕಾದಿದ್ದರು ಎನ್ನಲಾಗಿದೆ. ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಗುರುವಾರ ಆರ್ಯನ್ಗೆ ಜಾಮೀನು ನೀಡುವಾಗ, ಬಾಂಬೆ ಹೈಕೋರ್ಟ್ ಅವರಿಗೆ 14 ಜಾಮೀನು ಷರತ್ತುಗಳನ್ನು ವಿಧಿಸಿ, ಜೈಲಿನಿಂದ ಬಿಡುಗಡೆ ಮಾಡಲು ಆದೇಶ ನೀಡಿದೆ.
ಐದು ಪುಟಗಳ ಆದೇಶದಲ್ಲಿ, ಜಾಮೀನು ಪಡೆದಿರುವ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರನ್ನು ತಲಾ ಒಂದು ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ನಲ್ಲಿ ಒಂದು ಅಥವಾ ಇಬ್ಬರ ಶ್ಯೂರಿಟಿಯೊಂದಿಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಹೈಕೋರ್ಟ್ ಹೇಳಿತ್ತು. ಅದರಂತೆ ಇಂದು ಅವರನ್ನು ಬಿಡುಗಡೆ ಮಾಡಲಾಗಿದೆ.
Advertisement. Scroll to continue reading.