ಹಾನಗಲ್ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆಯವರು 64,489 ಮತಗಳನ್ನು ಪಡೆದು ಗೆದ್ದಿದ್ದಾರೆ. ಬಿಜೆಪಿಯ ಅಭ್ಯರ್ಥಿ ಶಿವರಾಜ್ ಸಜ್ಜನ್ 57,682 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಕ್ 682 ಮತಗಳನ್ನು ಪಡೆದಿದ್ದಾರೆ.