ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪುರಸ್ಕಾರ ನೀಡಲಾಗುವುದು ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಗೆ 2021ನೇ ಸಾಲಿನ ಮರಣೋತ್ತರ ಬಸವಶ್ರೀ ಪ್ರಶಸ್ತಿ ನೀಡುವುದಾಗಿ ತಿಳಿಸಿದ್ದಾರೆ.
ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದ್ದಾರೆ.
ಪುನೀತ್ ರಾಜ್ ಕುಮಾರ್ ಬಾಲನಟ, ನಾಯಕ ನಟ, ಹಿನ್ನೆಲೆ ಗಾಯಕ ಹಾಗೂ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿಯೂ ಸಮಾಜ ಸೇವೆ ಸಲ್ಲಿಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
Advertisement. Scroll to continue reading.
ಪ್ರಶಸ್ತಿಯು 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ನವೆಂಬರ್ 10 ರಂದು ಶರಣರು ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.
ಈ ನಡುವೆ ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕು ಎಂದು ಕನ್ನಡರಿಗರು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದಾರೆ.
Advertisement. Scroll to continue reading.