ಕೇದಾರನಾಥದಲ್ಲಿ ಶ್ರೀಆದಿಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
Published
0
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೇದಾರನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಶಿವನ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಅದ್ವೈತ ತತ್ವ ಪ್ರತಿಪಾದಕ ಶಂಕರಾಚಾರ್ಯ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ.
ಆದಿ ಗುರು ಶಂಕರಾಚಾರ್ಯ ಅವರ ಸಮಾಧಿಯು 2013 ರಲ್ಲಿ ಪ್ರವಾಹದಿಂದಾಗಿ ಹಾನಿಗೊಳಗಾಗಿದ್ದು, ಪುನರ್ ನಿರ್ಮಾಣವಾಗಿದೆ. ಅಲ್ಲಿ ಶಂಕರಾಚಾರ್ಯರ 12 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣ ಮಾಡಿದರು. ಈ ವೇಳೆ ಹಿಮಾಲಯ ಪರ್ವತ ಸಾಲಿನಲ್ಲಿರುವ ಕೇದಾರನಾಥದಲ್ಲಿ ಸುಮಾರು 400 ಕೋಟಿ ರೂಪಾಯಿ ವೆಚ್ಚದ ಪುನರ್ ನಿರ್ಮಾಣ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.
ಶಂಕರಾಚಾರ್ಯರ ಪ್ರತಿಮೆಗೆ ಮೈಸೂರಿನ ಶಿಲ್ಪಿ:
Advertisement. Scroll to continue reading.
ಮೈಸೂರಿನ ಹೆಸರಾಂತ ಶಿಲ್ಪ ಕಲಾಕಾರರು ಈ ಪ್ರತಿಮೆಯನ್ನು ನಿರ್ಮಾಣ ಮಾಡಿರುವುದು ವಿಶೇಷತೆ. ಮೈಸೂರಿನ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಅರುಣ್ ಯೋಗಿರಾಜ್ ಮತ್ತವರ ತಂಡ 9 ತಿಂಗಳ ಅವಧಿಯಲ್ಲಿ ಪ್ರತಿಮೆಯನ್ನು ಸಿದ್ಧಪಡಿಸಿ, ಕೇದಾರನಾಥದಲ್ಲಿ ಅದನ್ನು ಅಳವಡಿಸುವ ಕಾರ್ಯ ಪೂರ್ಣಗೊಳಿಸಿದ್ದಾರೆ. 35 ಟನ್ ತೂಕದ ಶಂಕರಾಚಾರ್ಯರ ಪ್ರತಿಮೆ ರೂಪಿಸುವ ಕಾರ್ಯ 2019ರಲ್ಲಿ ಆರಂಭಿಸಲಾಗಿತ್ತು.
80 ಟನ್ ಕಲ್ಲನ್ನು ಕೆತ್ತಿ ಅಂತಿಮವಾಗಿ 28 ಟನ್ ನಲ್ಲಿ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಹಾಸನದ ಬೇಲೂರು, ಹಳೇಬಿಡಿನ ಶಿಲ್ಪಕಲೆಗೆ ಬಳಸಿರುವ ಕೃಷ್ಣ ಶಿಲೆ ಕಲ್ಲನ್ನು ಬಳಸಲಾಗಿದ್ದು, ಮಳೆ, ಬಿಸಿಲು, ಬೆಂಕಿ, ನೀರು ಸೇರಿದಂತೆ ಯಾವುದರಿಂದಲೂ ಹಾನಿಯಾಗುವುದಿಲ್ಲ.
ಶಂಕರಾಚಾರ್ಯರ ಪ್ರತಿಮೆ ಅನಾವರಣದ ನಂತರ ಮೋದಿ ಅವರು ಅಲ್ಲಿಯೇ ಕೆಲ ಸಮಯ ಧ್ಯಾನಕ್ಕೆ ಕುಳಿತರು.
0 ಬ್ರಹ್ಮಾವರ : ರುಡ್ ಸೆಟ್ ಬ್ರಹ್ಮಾವರ ಮತ್ತು ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...