ಬೆಂಗಳೂರು: ರಾಜ್ಯಾದ್ಯಂತ ನವೆಂಬರ್ 11ರಂದು ಜಿಲ್ಲಾ ಮತ್ತು ತಾಲ್ಲೂಕುಗಳಲ್ಲಿ ಆಚರಿಸುವಂತೆ ಆದೇಶಿಸಿದ್ದಂತ ಒನಕೆ ಓಬವ್ವ ಜಯಂತಿಯನ್ನು ಮುಂದೂಡಲಾಗಿದೆ. ವಿಧಾನಪರಿಷತ್ ಚುನಾವಣೆ ಘೋಷಣೆಯ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಸರ್ಕಾರದ ಆದೇಶದಂತೆ ಒನಕೆ ಓಬವ್ವ ಜಯಂತಿಯನ್ನು ರಾಜ್ಯಾದ್ಯಂತ ನವೆಂಬರ್ 11ರಂದು ಜಿಲ್ಲಾ ಮತ್ತು ತಾಲ್ಲೂಕುಗಳಲ್ಲಿ ಆಚರಿಸುವಂತೆ ಪತ್ರದಲ್ಲಿ ತಿಳಿಸಲಾಗಿರುತ್ತದೆ.
ಆದರೆ, ವಿಧಾನಪರಿಷತ್ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ದಿನಾಂಕ 11-11-2021 ರಂದು ಮಾಡಲು ಉದ್ದೇಶಿಸಿರುವ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂಬುದಾಗಿ ತಿಳಿಸಲಾಗಿದೆ.