ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಹಿನ್ನೆಲೆ ಬೆಂಗಳೂರು ನಗರದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಡಿಸಿ ಮಂಜುನಾಥ್ ಆದೇಶ ಹೊರಡಿಸಿದ್ದಾರೆ
ಇನ್ನೂ ಶನಿವಾರ ರಜೆ ನೀಡುವ ಬಗ್ಗೆ ನಾಳೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
Advertisement. Scroll to continue reading.
ರಾಜ್ಯದ ನಾನಾ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮದ ಹಿನ್ನಲೆ, ಶಾಲೆಗಳಿಗೆ ರಜೆ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ.
ಆಯುಕ್ತ ವಿಶಾಲ್ ಆರ್ ಆದೇಶ ಹೊರಡಿಸಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗುವುದಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದ್ರೆಯಾಗದಂತೆ, ಆಯಾ ಜಿಲ್ಲೆಗಳ ಪರಿಸ್ಥಿತಿಯುನ್ನು ನೋಡಿಕೊಂಡು, ರಜೆ ನೀಡಬೇಕು ಎಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ಅವರು, ಒಂದು ವೇಳೆ ರಜೆ ನೀಡಿದಲ್ಲಿ, ಮುಂದಿನ ದಿನದಲ್ಲಿ ತರಗತಿಯನ್ನು ಸರಿದೂಗಿಸಬೇಕು ಎಂದು ಸೂಚನೆ ನೀಡಿದ್ದಾರೆ.
Advertisement. Scroll to continue reading.