ರಾಷ್ಟ್ರೀಯ

ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಾಸ್; ಪ್ರಧಾನಿ ಮೋದಿ ಮಹತ್ವದ ಘೋಷಣೆ

0

ನವದೆಹಲಿ : ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ.

ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಆದ್ಯತೆ. ದೇಶದಲ್ಲಿ 100 ರಲ್ಲಿ 80 ರೈತರು ಸಣ್ಣ ಹಿಡುವಳಿ ರೈತರಾಗಿದ್ದಾರೆ. ದೇಶದಲ್ಲಿ 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಸಣ್ಣ ರೈತರ ಸಮಸ್ಯೆ ಬಗೆ ಹರಿಸಯಲು ಪ್ರಯತ್ನ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಬಿತ್ತನೆ ಬೀಜ, ಮಾರುಕಟ್ಟೆ ಉಳಿತಾಯ ಯೋಜನೆ, ರೈತರಿಗೆ ಫಸಲ್ ಬಿಮಾ, ಪೆನ್ಷನ್ ಯೋಜನೆ ಜಾರಿಗೆ ತಂದಿದ್ದೇವೆ. ರೈತರು ತಮ್ಮ ಬೆಳೆಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಕೃಷಿ ಬಜೆಟ್ 5 ಪಟ್ಟು ಹೆಚ್ಚಿಸಿದ್ದೇವೆ. 22 ಕೋಟಿ ರೈತರಿಗೆ ಸಾಯಿಲ್ ಹೆಲ್ತ್ ಕಾರ್ಡ್ ವಿತರಿಸಿದ್ದೇವೆ.

Advertisement. Scroll to continue reading.

ಸಣ್ಣ ರೈತರ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕೃಷಿ ಕಾಯ್ದೆಗಳನ್ನು ಜಾರಿ ಮಾಡಲಾಗಿತ್ತು. ಆದರೆ ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com