ರಾಷ್ಟ್ರೀಯ

ಮಾರ್ಚ್ 2022ರ ವರೆಗೆ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ

0

ನವದೆಹಲಿ: 2022ರ ಮಾರ್ಚ್ ವರೆಗೆ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವವರ ನೇತೃತ್ವದಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಇಂದು ಪ್ರಧಾನಮಂತ್ರಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಔಪಚಾರಿಕತೆಗಳನ್ನು ಪೂರ್ಣಗೊಳಿಸಿದೆ. ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ, ಈ ಮೂರು ಕಾನೂನುಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದೆ.

ಇದೇ ವೇಳೆ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯನ್ನು ಮಾರ್ಚ್ 2022 ರ ವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಂಪುಟ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.

Advertisement. Scroll to continue reading.

ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ 2020 ರ ಮಾರ್ಚ್ ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಘೋಷಿಸಿದ್ದರು. ಆರಂಭದಲ್ಲಿ ಏಪ್ರಿಲ್-ಜೂನ್ 2020ರ ಅವಧಿಗೆ ಪ್ರಾರಂಭಿಸಲಾಯಿತು. ಆದರೆ, ನಂತ್ರ ನವೆಂಬರ್ 30 ರವರೆಗೆ ವಿಸ್ತರಿಸಲಾಯಿತು. ಈಗ ಸರ್ಕಾರ ಮತ್ತೊಮ್ಮೆ 2022ರ ಮಾರ್ಚ್ ವರೆಗೆ ಉಚಿತ ಪಡಿತರ ಒದಗಿಸಲು ‘ಪಿಎಂ ಗರೀಬ್ ಕಲ್ಯಾಣ್ ಯೋಜನೆ’ ವಿಸ್ತರಿಸಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com