ವರದಿ : ದಿನೇಶ್ ರಾಯಪ್ಪನಮಠ
ಕೋಟ: ಶ್ರೀಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇದರ ಚುನಾವಣಾ ಸಾಕ್ಷರತಾ ಸಂಘ ಹಾಗೂ ತಹಶೀಲ್ದಾರರ ಕಚೇರಿ, ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಕಾರ್ಯಕ್ರಮ ನಡೆಯಿತು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಬಿ.ಆರ್.ಸಿ ಮಾತನಾಡಿ, ಪ್ರಜಾ-ಪ್ರಭುತ್ವ ರಾಷ್ಟ್ರವಾಗಿರುವ ಭಾರತದ ರಾಜಕೀಯದ ಸ್ಥಿರತೆಗೆ ಮತದಾರರ ಮತ ಹಾಗೂ ಚುನಾವಣೆಯಲ್ಲಿ ಭಾಗವಹಿಸುವಿಕೆ ಪ್ರಮುಖವಾದುದು. ರಾಜಕೀಯ ಶಿಕ್ಷಣವುಳ್ಳ ಪ್ರಜ್ಞಾವಂತ ಯುವ ಮತದಾರರ ಮತ ದೇಶಕ್ಕೆ ಭದ್ರತೆ ಒದಗಿಸಬಲ್ಲದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ದೇಶದ ಭವಿಷ್ಯವನ್ನು ಹಿತದಲ್ಲಿ ಇರಿಸಿಕೊಂಡು ಮತ ನೋಂದಣಿ ಹಾಗೂ ಪರಿಷ್ಕರಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ. ಹಾಗೂ ಮತ ಸೋರಿ ಹೋಗದಂತೆ ಜಾಗ್ರತರಾಗಿರಿ ಎಂದರು.
Advertisement. Scroll to continue reading.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕುಂದಾಪುರ ಕಂದಾಯ ನಿರೀಕ್ಷಕ ದಿನೇಶ, ಹಾಗೂ ಕೋಟೇಶ್ವರ ಗ್ರಾಮ ಲೆಕ್ಕಿಗ ಆನಂದ, ಮತ ನೋಂದಣಿ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಸಂಚಾಲಕಿ ಜ್ಯೋತಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಗ್ರಂಥಪಾಲಕ ರವಿಚಂದ್ರ ಹೆಚ್.ಎಸ್. ವಂದಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಸೌಜನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.
Advertisement. Scroll to continue reading.