ಚಿಕ್ಕಬಳ್ಳಾಪುರ : ಒಮಿಕ್ರಾನ್ ವೈರಸ್ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಕ್ಕೆ ವಿದೇಶದಿಂದ ಬಂದವರಿಗೆ ಕ್ವಾರಂಟೈನ್ ಅವಧಿಯನ್ನು ಹೆಚ್ಚಳ ಮಾಡಲು ಸರ್ಕಾರ ಮುಂದಾಗಿದೆ. ಈ ಹಿಂದೆ 7 ದಿನಗಳ ವರೆಗೆ ಕ್ವಾರಂಟೈನ್ ವಿಧಿಸಲಾಗುತ್ತಿತ್ತು. ಮುಂದೆ ಕ್ವಾರಂಟೈನ್ ಅವಧಿಯನ್ನು 14 ದಿನಕ್ಕೆ ಹೆಚ್ಚಳ ಮಾಡಲಾಗುತ್ತಿದೆ ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತಂತೆ ಇಂದು ಚಿಕ್ಕಬಳ್ಳಾಪುರದ ಅವರು, ಒಮಿಕ್ರಾನ್ ವೈರಸ್ ಹರಡುವಿಕೆ, ಮತ್ತು ವ್ಯಾಪಕತೆ ಬಗ್ಗೆ ಸ್ಪಷ್ಟವಾಗಿ ಯಾವುದೇ ಮಾಹಿತಿ ಇಲ್ಲ. ಆದರೆ, ಡೆಲ್ಟಾ ಸೋಂಕಿಗಿಂತಲೀ ಒಮಿಕ್ರಾನ್ ವೈರಸ್ ಹೆಚ್ಚು ಡೇಂಜರ್ ಎಂದು ಹೇಳಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ತಡೆ ಸಂಬಂಧ ನಾಳೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಡಿಹೆಚ್‌ಓ, ಟಿಹೆಚ್‌ಓ, ಆಶಾ ಸೇರಿದಂತೆ ವಿವಿಧ ಅಧಿಕಾರಿಗಳ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ವಿದೇಶಿ ಪ್ರಯಾಣಿಕರ ಕ್ವಾರಂಟೈನ್ ಅವಧಿಯನ್ನು 7 ದಿನಗಳಿಂದ 14 ದಿನಗಳಿಗೆ ಹೆಚ್ಚಳ ಮಾಡುವಂತೆ ಅನೇಕರು ಸಲಹೆ ಮಾಡಿದ್ದು, ಈ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಇದೇ ವೇಳೆ ತಿಳಿಸಿದರು.
Advertisement. Scroll to continue reading.