ಚಂದನವನ : ನಟಿ ಅಮೂಲ್ಯ ನ್ಯೂಸ್ ನೀಡಿದ್ದಾರೆ. ಹೌದು ಪತಿ ಜಗದೀಶ್ ಜೊತೆಗಿನ ಫೋಟೋ ಹಂಚಿಕೊಂಡಿರುವ ಅವರು, ತಾವು ಮೊದಲ ಮಗವಿನ ಆಗಮನದ ನಿರೀಕ್ಷೆಯಲ್ಲಿ ಇರುವುದಾಗಿ ತಿಳಿಸಿದ್ದಾರೆ.
ಪತಿ ಜಗದೀಶ್ ಜತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು, ಸೋಶಿಯಲ್ ಮೀಡಿಯಾ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ. ದಂಪತಿಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.
ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಅಮೂಲ್ಯ ಅವರು ಇತ್ತೀಚಿನ ದಿನಗಳಲ್ಲಿ ಯಾವುದೇಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಸಂಸಾರದ ಕಡೆಗೆ ಅವರು ಹೆಚ್ಚು ಗಮನ ನೀಡಿದ್ದಾರೆ. ಈಗ ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸದ್ಯ ಅವರ ಹೊಸ ಈ ಫೋಟೋ ಅಭಿಮಾನಿಗಳ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ.
Advertisement. Scroll to continue reading.
ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಮಿಂಚಿದರು. ಗಣೇಶ್, ಯಶ್, ಲವ್ಲೀ ಸ್ಟಾರ್ ಪ್ರೇಮ್, ಕೃಷ್ಣ ಅಜಯ್ ರಾವ್, ದುನಿಯಾ ವಿಜಯ್ ಮುಂತಾದ ಸ್ಟಾರ್ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದ್ದ ಅವರು, ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇರುವಾಗಲೇ 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್ ಜತೆ ಅಮೂಲ್ಯ ಮದುವೆ 2017ರಲ್ಲಿ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ‘ನಾವೀಗ ಕೇವಲ ಇಬ್ಬರಲ್ಲ….’ ಎಂಬ ಕ್ಯಾಪ್ಷನ್ ನೀಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ.
Advertisement. Scroll to continue reading.