ಬೆಂಗಳೂರು : ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಶನಿವಾರ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಪರಿಣಾಮ ಕರ್ನಾಟಕದಲ್ಲಿ ಡಿಸೆಂಬರ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ ?
Advertisement. Scroll to continue reading.
ಇಂದಿನಿಂದ ಬೆಂಗಳೂರು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಡಗು, ಜಿಲ್ಲೆಯಲ್ಲಿ ಮಳೆಯಾಗಲಿದೆ