ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಅವರ ಮಿದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿ ತಲುಪಿದ್ದು, ಹೃದಯವೂ ವೀಕ್ ಆಗುತ್ತಿದೆ. ಶಿವರಾಂ ಅವರು ಹೆಚ್ಚು ಹೊತ್ತು ನಮ್ಮೊಂದಿಗೆ ಇರುವುದಿಲ್ಲ ಎಂದೆನಿಸುತ್ತಿದೆ ಎಂದು ಪ್ರಶಾಂತ್ ಆಸ್ಪತ್ರೆಯ ವೈದ್ಯ ಮೋಹನ್ ಕಣ್ಣೀರಿಟ್ಟಿದ್ದಾರೆ.
ತಂದೆಯಂತೆ ಇದ್ದರು. ಈ ವಿಚಾರ ಹೇಳಲು ದುಃಖವಾಗುತ್ತಿದೆ. ಚಿಕಿತ್ಸೆಗೆ ಸ್ಪಂದಿಸುತ್ತಾರೆ ಎಂದು ಹೇಳುವುದು ಕಷ್ಟ ಎಂದು ಅವರು ತಿಳಿಸಿದ್ದಾರೆ.
ಅಯ್ಯಪ್ಪ ಸ್ವಾಮಿ ಪೂಜೆ ವೇಳೆ ಹಿರಿಯ ನಟ ಶಿವರಾಂ ಬಿದ್ದಿದ್ದಾರೆ. ಬೆಂಗಳೂರಿನ ಸೀತಾ ಸರ್ಕಲ್ ಬಳಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.