ನವದೆಹಲಿ: ಮುಂಬರುವಂತೆ ಏಕ ದಿನ ಕ್ರಿಕೆಟ್ ಸರಣಿ ಹಾಗೂ ಟಿ20 ನಾಯಕ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಬಿಸಿಸಿಐ ತೆರೆ ಎಳೆದಿದೆ. ರೋಹಿತ್ ಶರ್ಮಾ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂಬ ವಿಚಾರ ಹೊರಹಾಕಿದೆ.
ಇಂದು ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಹಿತಿ ಬಿಡುಗಡೆ ಮಾಡಿದೆ. ಮುಂಬರುವಂತ ಭಾರತೀಯ ಕ್ರಿಕೆಟ್ ತಂಡ ಏಕ ದಿನ ಹಾಗೂ ಟಿ20 ಪಂದ್ಯಾವಳಿಗೆ ನಾಯಕರನ್ನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ತಿಳಿಸಿದೆ.
ಅಂದಹಾಗೇ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ಯಾರನ್ನು ಟೀಂ ಇಂಡಿಯಾ ಏಕ ದಿನ ಮತ್ತು ಟಿ20 ಪಂದ್ಯಾವಳಿಗಳ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ಎದ್ದಿತ್ತು. ಕೊನೆಗೂ ರೋಹಿತ್ ಶರ್ಮಾ ಟೀ ಇಂಡಿಯಾದ ಏಕ ದಿನ ಪಂದ್ಯಾವಳಿ ಹಾಗೂ ಟಿ20 ನಾಯಕರಾಗಿ ಆಯ್ಕೆ ಮಾಡಲಾಗಿದೆ.
Advertisement. Scroll to continue reading.
ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯಲಿದ್ದು, ಅದರಂತೆ ದಕ್ಷಿಣ ಆಫ್ರಿಕಾ ಸರಣಿಯಲ್ಲೂ ಅವರು ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ.
ದಕ್ಷಿಣ ಆಫ್ರಿಕಾ ಸರಣಿ ಇದೇ ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 ಸೆಂಚುರಿಯನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಹಾಗೆಯೇ, ಎರಡನೇ ಟೆಸ್ಟ್ ಜನವರಿ 3 ರಿಂದ 07 ಜೋಹಾನ್ಸ್ ಬರ್ಗ್ನಲ್ಲಿ, ಮೂರನೇ ಟೆಸ್ಟ್ ಜನವರಿ 11 ರಿಂದ 15 ಕೇಪ್ ಟೌನ್ ನಲ್ಲಿ ನಡೆಯಲಿದೆ.
ಅದೇ ರೀತಿ ಮೂರು ಪಂದ್ಯಗಳ ಏಕದಿನ ಸರಣಿ ಕೂಡ ನಡೆಯಲಿದ್ದು, ಮೊದಲ ಏಕದಿನ ಪಂದ್ಯ ಜನವರಿ 19, 2ನೇ ಏಕದಿನ ಪಂದ್ಯ- ಜನವರಿ 21, 3ನೇ ಏಕದಿನ ಪಂದ್ಯ- 23 ಜನವರಿ ಕೇಪ್ ಟೌನ್ ನಲ್ಲಿ ನಡೆಯಲಿದೆ.
Advertisement. Scroll to continue reading.