ಬ್ರಹ್ಮಾವರ: ಪ್ರಾಥಮಿಕ ಆರೋಗ್ಯ ಕೇಂದ್ರ ಮಂದಾರ್ತಿ ಉಪ ಕೇಂದ್ರ ವ್ಯಾಪ್ತಿಯ ಆರೋಗ್ಯವಂತ ಶಿಶು ಪ್ರದರ್ಶನ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ ಮಂದಾರ್ತಿಯ ವೈದ್ಯಾಧಿಕಾರಿ ಡಾಕ್ಟರ್ ಅನಿಲ್ ಕುಮಾರ್ ಮಾತನಾಡಿ, ಮಕ್ಕಳ ಸಂಪೂರ್ಣ ಆರೋಗ್ಯದ ಲಾಲನೆ-ಪಾಲನೆ ಪೋಷಣೆಯ ಬಗ್ಗೆ ಹೆತ್ತವರ ಜವಾಬ್ದಾರಿಯ ಬಗ್ಗೆ ಹಾಗೂ ಮಕ್ಕಳಿಗೆ ನೀಡುವ ಲಸಿಕಾ ಕಾರ್ಯಕ್ರಮದ ಬಗ್ಗೆ ಸಭೆಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಬ್ರಹ್ಮಾವರ ತಾಲೂಕು ಘಟಕದ ಹಿರಿಯ ಚಿಕಿತ್ಸೆ ಮೇಲ್ವಿಚಾರಕ ಮಂಜುನಾಥ್ , ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿ ದೇವಪ್ಪ ಪಟಗಾರ, ಮಂದಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಔಷಧಧಾರಕ ಉಮೇಶ್ ಶೆಟ್ಟಿ, ಆರೋಗ್ಯ ನಿರೀಕ್ಷಣಾ ಅಧಿಕಾರಿ ರಕ್ಷಿತ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ಪರ್ಧಾ ಮಾನದಂಡ ಅನುಸಾರ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
Advertisement. Scroll to continue reading.