ಬೆಂಗಳೂರು : ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಲೋಹಿತ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾನಗರದ ಚಲ್ಲಘಟ್ಟ ಬಳಿ ನಡೆದಿದೆ.
ಬೆಂಗಳೂರಿನ ಇಂದಿರಾನಗರದ ಚಲ್ಲಘಟ್ಟ ಬಳಿ ಲೋಹಿತ್ ನನ್ನು ಬಂಧಿಸಲು ಹೋದಾಗ, ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಲೋಹಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ಲೋಹಿತ್ ನನ್ನು ವಶಕ್ಕೆ ಪಡೆದಿದ್ದಾರೆ.
ಅರೋಪಿ ಲೋಹಿತ್ ಮೇಲೆ ಕೊಲೆ, ಅಪಹರಣ ಸೇರಿದಂತೆ 17 ಪ್ರಕರಣಗಳಿವೆ. ಆತನ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಕಾರ್ಯಾಚರಣೆಗೆ ಹೋಗಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ಪೊಲೀಸರು ಆರೋಪಿ ಲೋಹಿತ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
Advertisement. Scroll to continue reading.