ಅಂತಾರಾಷ್ಟ್ರೀಯ

21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಪಟ್ಟ; ಹರ್ನಾಜ್ ಕೌರ್ ಸಂಧು ಭುವನ ಸುಂದರಿ

1

ನವದೆಹಲಿ : 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಪಟ್ಟ ಸಿಕ್ಕಿದೆ. 70 ನೇ ಭುವನ ಸುಂದರಿಯಾಗಿ ಹರ್ನಾಜ್ ಕೌರ್ ಸಂಧು ಆಯ್ಕೆಯಾಗಿದ್ದಾರೆ.

ಇಸ್ರೇಲ್ ನಲ್ಲಿ ನಡೆದ ಮಿಸ್ ಯೂನಿವರ್ಸ್ 2021 ರ ಸ್ಪರ್ಧೆಯಲ್ಲಿ, ನಟಿ ಮತ್ತು ರೂಪದರ್ಶಿ ಹರ್ನಾಜ್ ಕೌರ್ ಸಂಧು ಅವರನ್ನು ಸ್ಪರ್ಧೆಯ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ದಕ್ಷಿಣ ಆಫ್ರಿಕಾದ ಲಲೆಲಾ ಮ್ಸ್ವಾನೆ ಅವರು ಎರಡನೇ ರನ್ನರ್ ಅಪ್ ಆಗಿ ಆಯ್ಕೆಯಾಗಿದ್ದಾರೆ.

ಪಂಜಾಬ್ ನ 21 ವರ್ಷದ ಹರ್ನಾಜ್ ಇಸ್ರೇಲ್ ನ ಇಲಾತ್ ನಲ್ಲಿ ನಡೆದ 70ನೇ ಮಿಸ್ ಯೂನಿವರ್ಸ್ ಕಾರ್ಯಕ್ರಮದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಲಾರಾ ದತ್ತಾ ಪ್ರಶಸ್ತಿ ಗೆದ್ದ 21 ವರ್ಷಗಳ ನಂತರ ಹರ್ನಾಜ್ ಅವರು ಮಿಸ್ ಯುನಿವರ್ಸ್ ಆಗಿ ಆಯ್ಕೆಯಾಗಿದ್ದಾರೆ.

Advertisement. Scroll to continue reading.

ಚಂಡೀಗಢದ ಮಾಡೆಲ್ ಹರ್ನಾಜ್ ಸಂಧು ತಮ್ಮ ವೃತ್ತಿಜೀವನದಲ್ಲಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದು, 2017ರಲ್ಲಿ ಟೈಮ್ಸ್ ಫ್ರೆಶ್ ಫೇಸ್ ಮಿಸ್ ಚಂಡೀಗಢ, 2018ರಲ್ಲಿ ಮಿಸ್ ಮ್ಯಾಕ್ಸ್ ಎಮರ್ಜಿಂಗ್ ಸ್ಟಾರ್, 2019 ರಲ್ಲಿ ಫೆಮಿನಾ ಮಿಸ್ ಇಂಡಿಯಾ ಪಂಜಾಬ್ ಮತ್ತು 2021 ರಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com