ಬೆಂಗಳೂರು : ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ ನಿಧನರಾಗಿದ್ದಾರೆ. ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.
ಅವರು ಡಿ.10ರಂದು ಕೋಲಾರದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ.
ಫೆಬ್ರವರಿಯಲ್ಲಿ ಜಾಲಪ್ಪ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಆದ್ದರಿಂದ ಸತತ ಎರಡು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
Advertisement. Scroll to continue reading.
ಜಾಲಪ್ಪ ಅಕ್ಟೋಬರ್ 19, 1925 ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಜನಿಸಿದರು.
ಜಾಲಪ್ಪ 4 ಬಾರಿ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವರಾಗಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದರು.
ಇನ್ನು ಜಾಲಪ್ಪ ನಿಧನಕ್ಕೆ ಅನೇಕ ರಾಜಕೀಯ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
Advertisement. Scroll to continue reading.