ರಾಜ್ಯ

ಹುಬ್ಬಳ್ಳಿ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಇಂಜಿನಿಯರ್ ಸಾವು

2

ಹುಬ್ಬಳ್ಳಿ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬಿಬಿಎಂಪಿ ಅಧೀಕ್ಷಕ ಇಂಜಿನಿಯರ್ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಡೆದಿದೆ.

ರಂಗರಾಜು ಎಸ್. ಎ. (59) ಮೃತಪಟ್ಟವರು. ಭಾನುವಾರ ರಾತ್ರಿ ಬೆಂಗಳೂರಿಗೆ ಆಗಮಿಸಲು ರಂಗರಾಜು ರೈಲು ಹತ್ತಬೇಕಿತ್ತು. ಆದರೆ ಬೆಳಗಾವಿಗೆ ಹೋಗುವ ರೈಲನ್ನು ಹುಬ್ಬಳ್ಳಿ ನಿಲ್ದಾಣದಲ್ಲಿ ಹತ್ತಿದ್ದು, ಬೇರೆ ರೈಲು ಹತ್ತಿರುವುದು ತಿಳಿದು ಗಾಬರಿಯಿಂದ ಚಲಿಸುತ್ತಿದ್ದ ರೈಲಿನಿಂದ ಇಳಿದಿದ್ದಾರೆ. ರೈಲು ಇಳಿಯುವಾಗ ಆಯತಪ್ಪಿ ಬಿದ್ದು, ಪ್ಲಾಟ್‌ ಫಾರ್ಮ್‌ನಲ್ಲಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರಂಗರಾಜು ಎಸ್. ಎ. ಬೆಂಗಳೂರಿನಲ್ಲಿ ಬಿಬಿಎಂಪಿಯ ಕೆಆರ್‌ಐಡಿಎಲ್ ವಿಭಾಗದಲ್ಲಿ ಸೂಪರಿಟೆಂಡೆಂಟ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

Advertisement. Scroll to continue reading.

ಈ ಬಗ್ಗೆ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com