ಮುಂಬೈ: ಪನಾಮ ಪೇಪರ್ಸ್ ಹಗರಣಕ್ಕೆ ಸಂಬಂಧಿಸಿ ಖ್ಯಾತ ನಟಿ ಐಶ್ವರ್ಯಾ ರೈ ಗೆ ಇಂದು ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ಜಾರಿ ನಿರ್ದೇಶನಾಲಯವು ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮನಿ ಲಾಂಡರಿಂಗ್ ತಡೆ ಕಾಯಿದೆ, 2002 ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಿದೆ. ಪನಾಮಾ ಪೇಪರ್ಸ್ ಪ್ರಕರಣದಲ್ಲಿ ವಿದೇಶದಲ್ಲಿ ಸಂಪತ್ತನ್ನು ಸಂಗ್ರಹಿಸಿರುವ ಆರೋಪದ ಮೇಲೆ ನಟಿ ಐಶ್ವರ್ಯಾ ರೈಗೆ ಈಗ ಸಮನ್ಸ್ ನೀಡಲಾಗಿದೆ. ಅವರು ಈ ಹಿಂದೆ ಎರಡು ಸಂದರ್ಭಗಳಲ್ಲಿ ಸಮಯ ಕೋರಿ, ಪನಾಮಾ ಪೇಪರ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಂದೆ ಮುಂದೂಡಿಕೆ ಅರ್ಜಿಯನ್ನು ಅವರು ಸಲ್ಲಿಸಿದ್ದರು.
ಏನಿದು ಪ್ರಕರಣ?
Advertisement. Scroll to continue reading.
2016 ರಲ್ಲಿ ಯುಕೆಯಲ್ಲಿ ಪನಾಮಾ ಕಾನೂನು ಸಂಸ್ಥೆಯೊಂದರ 11.5 ಕೋಟಿ ತೆರಿಗೆ ದಾಖಲೆಗಳು ಸೋರಿಕೆಯಾಗಿದ್ದವು. ಇದರಲ್ಲಿ ಪ್ರಪಂಚದಾದ್ಯಂತದ ದೊಡ್ಡ ನಾಯಕರು, ಉದ್ಯಮಿಗಳು ಮತ್ತು ದೊಡ್ಡ ವ್ಯಕ್ತಿಗಳ ಹೆಸರುಗಳನ್ನು ಬಹಿರಂಗಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಭಾರತದ ಸುಮಾರು 500 ಜನರ ಹೆಸರುಗಳು ಈ ಪಟ್ಟಿಯಲ್ಲಿ ಇರುವುದು ಬಹಿರಂಗವಾಗಿದೆ. ಇದರಲ್ಲಿ ಬಚ್ಚನ್ ಕುಟುಂಬದ ಹೆಸರೂ ಸೇರಿತ್ತು.