ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ವಡ್ಡರ್ಸೆ ಈ ನಾಡು ಕಂಡ ಶ್ರೇಷ್ಠ ಪತ್ರಕರ್ತ : ಚಂದ್ರಶೇಖರ್ ಹೆಗ್ಡೆ
Published
0
ವರದಿ : ಬಿ.ಎಸ್.ಆಚಾರ್ಯ
ಕೋಟ: ವಡ್ಡರ್ಸೆ ರಘುರಾಮ ಶೆಟ್ಟಿಯವರು ಈ ನಾಡು ಕಂಡ ಶ್ರೇಷ್ಠ ಸಮಾಜವಾದಿ ನಿಲುವಿನ ಪತ್ರಕರ್ತರಾಗಿದ್ದು ಅವನರನ್ನು ಇಡೀ ರಾಜ್ಯವೇ ಗೌರವಿಸುತ್ತದೆ ಎಂದು ಬ್ರಹ್ಮಾವರ ಸ್ಟೋಟ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ ತಿಳಿಸಿದರು.
ಅವರು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ. ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ವಡ್ಡರ್ಸೆಯವರ ಮನೆಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.
Advertisement. Scroll to continue reading.
ಅವರ ಹುಟ್ಟೂರಿನ ಮನೆಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸಂಘಟಿಸುತ್ತಾ ಬಂದಿರುವುದು ಶ್ಲಾಘನೀಯ. ನಿಮ್ಮ ಕಾರ್ಯಕ್ರಮಕ್ಕೆ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನಿರತಂತರ ಸಹಕಾರ ನೀಡಲಿದೆ ಎಂದರು.
ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮಾತನಾಡಿ, ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಅತ್ಯುತ್ತಮವಾದ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಎಲ್ಲಾ ಸಂಘಟನೆಗಳಿಗೆ ಇದು ಆದರ್ಶವಾಗಿದೆ. ನಿಮ್ಮ ಒಗ್ಗಟ್ಟು ಇದೇ ರೀತಿ ಮುಂದುವರಿಯಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಮಾತನಾಡಿ, ಕುಂದಪ್ರಭ ವಾರಪತ್ರಿಕೆಯ ಸಂಪಾದಕ ಯು.ಎಸ್. ಶೆಣೈ ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಡಿ. 26ರಂದು ಅಪರಾಹ್ನ 3.30 ಕ್ಕೆ ಬ್ರಹ್ಮಾವರ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಈ ಸಂದರ್ಭ ವಡ್ಡರ್ಸೆ ಗ್ರಾ.ಪಂ. ಅಧ್ಯಕ್ಷೆ ಸವಿತಾ ಪ್ರಕಾಶ್ ಆಚಾರ್ಯ, ಮಾಜಿ ಅಧ್ಯಕ್ಷ ಪ್ರಕಾಶ್ ಆಚಾರ್ಯ ಹಾಗೂ ಮುಖ್ಯ ಶಿಕ್ಷಕ ಕೊತ್ತಾಡಿ ಸಂತೋಷ ಶೆಟ್ಟಿ, ಜಿಲ್ಲಾ ಸಂಘದ ಸದಸ್ಯ ಗಣೇಶ್ ಸಾಬ್ರಕಟ್ಟೆ, ಪತ್ರಕರ್ತ ಪ್ರವೀಣ್ ಮುದ್ದೂರ್, ಪ್ರವೀಣ್ ಬ್ರಹ್ಮಾವರ, ಹರೀಶ್ ಕಿರಣ್ ತುಂಗ ಉಪಸ್ಥಿತರಿದ್ದರು.
ಸಂಘದ ಜತೆ ಕಾರ್ಯದರ್ಶಿ ಕೆ.ಜಿ. ವೈದ್ಯ ಸ್ವಾಗತಿಸಿ, ಕಾರ್ಯಕ್ರಮದ ಸಂಚಾಲಕ ವಸಂತ್ ಗಿಳಿಯಾರು ಪ್ರಾಸ್ತಾವಿಕ ಮಾತನಾಡಿ, ಉಪಾಧ್ಯಕ್ಷ ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ಪ್ರತಕರ್ತರ ಸಂಘದ ಪ್ರಭಾರ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ವಂದಿಸಿದರು.