ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ.
ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆದಿದೆ. ಓರ್ವ ನಾಗರಿಕನನ್ನು ಹತ್ಯೆ ಮಾಡಲಾಗಿದೆ.
ಸಂಜೆ 6 ಗಂಟೆ ವೇಳೆಗೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ರೌಫ್ ಅಹ್ಮದ್ ಎಂಬಾತನ ಮೇಲೆ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಆತನನ್ನು ಎಸ್ಎಂಹೆಚ್ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತ ಮೃತಪಟ್ಟಿದ್ದಾನೆ.
Advertisement. Scroll to continue reading.
ಅನಂತ್ ನಾಗ್ ಜೆಲ್ಲೆಯ ಪಿ ಎಸ್ ಬೆಹರಾದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಕೂಡ ಗುಂಡಿನ ದಾಳಿ ನಡೆದಿದ್ದು, ಪೊಲೀಸ್ ಸಿಬ್ಬಂದಿ ಮೊಹಮದ್ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.