ವರದಿ : ದಿನೇಶ್ ರಾಯಪ್ಪನಮಠ
ಕೋಟ: ಡಿ. ಜಿ. ಶೆಟ್ಟಿ ಎಜುಕೇಷನಲ್ ಸೊಸೈಟಿ ಧಾರವಾಡ. ಇದರ ಬಿ.ಡಿ. ಶೆಟ್ಟಿ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಮಾಬುಕಳ ಇಲ್ಲಿನ ವಿದ್ಯಾರ್ಥಿಗಳಿಗಾಗಿ ಮತದಾರರ ಹಕ್ಕುಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಅಗಮಿಸಿದ ಕೋಟ ಲಕ್ಷ್ಮೀಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ನೀಲಾವರ ಮಾಹಿತಿ ನೀಡಿ, ಮತದಾನದ ಹಕ್ಕುಗಳನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ದೇಶದ ಅತ್ಯುನ್ನತ ಹುದ್ದೆಯಲ್ಲಿರುವವರ ಹಾಗೂ ಒಬ್ಬ ಸಾಮಾನ್ಯನ ಮತಕ್ಕೂ ಯಾವುದೇ ವ್ಯತ್ಯಾಸ ಇರುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸಮಾನರು ಎಂದು ತಿಳಿದರು. ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಅತಿಥಿ ಜಿಲ್ಲಾ ಮತದಾರರ ಸಾಕ್ಷರತಾ ಕ್ಲಬ್ ರಾಯಭಾರಿ ವಿಘ್ನೇಶ್ ಶೆಣೈ ಇವರು ಮತದಾರರ ಪಟ್ಟಿಗೆ ಸೇರ್ಪಡೆಯಾಗದ ವಿದ್ಯಾರ್ಥಿಗಳನ್ನು ಮೊಬೈಲ್ ತಂತ್ರಜ್ಞಾನದ ಮೂಲಕ ಸೇರ್ಪಡೆಗೊಳಿಸುವ ವಿಧಾನವನ್ನು ತಿಳಿಸಿದರು.
Advertisement. Scroll to continue reading.
ಕಾಲೇಜಿನ ಪ್ರಾಂಶುಪಾಲ ಮೇಜರ್ ಜಿ. ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಎನ್.ಎಸ್. ಎಸ್.ಘಟಕದ ಅಧಿಕಾರಿ ಹಾಗೂ ಮತದಾರರ ಸಾಕ್ಷರತಾ ಸಂಘದ ಸಂಚಾಲಕರಾದ ಸುಕುಮಾರ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಉಪನ್ಯಾಸಕಿ ಪ್ರಮಿಳಾ ನಿರೂಪಿಸಿ, ವಂದಿಸಿದರು.